ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ,ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

Laxman Bariker
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ,ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ
WhatsApp Group Join Now
Telegram Group Join Now

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ,ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

ಕಲ್ಯಾಣ ಕರ್ನಾಟಕ ವಾರ್ತೆ

ಲಿಂಗಸುಗೂರು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕೋ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ನೀರಲಕೇರಿ ಗ್ರಾಮದ ಹುಲ್ಲಪ್ಪ(25) ಶಿಕ್ಷೆಗೆ ಗುರಿಯಾದ ಆರೋಪಿ. ಜನವರಿ 2021 ರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ನಡೆಸಿದ್ದ, ನೊಂದ ಅಪ್ರಾಪ್ತ ಬಾಧಿತಳು ನೀಡಿದ ದೂರಿನ ಮೇರೆಗೆ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಕೊಂಡು ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕ ಮಹಾಂತೇಶ ಸಜ್ಜನ ಆರೋಪಿತನ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪಣೆ ಪತ್ರವನ್ನು ಸಲ್ಲಿಸಿದ್ದರು.

20 ಸಾಕ್ಷಿಗಳ ಪೈಕಿ 17 ಸಾಕ್ಷಿದಾರರ ವಿಚಾರಣೆ ನಡೆಸಿದ್ದು, ಸಾಕ್ಷಿ ಪುರಾವೆಗಳನ್ನು ಪರೀಶಿಲಿಸಿ ಆರೋಪಿಗೆ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಯವರು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ. 15,000 ದಂಡವನ್ನು ವಿಧಿಸಿದ್ದಾರೆ ಮತ್ತು ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ 9 ಲಕ್ಷ ಪರಿಹಾರವನ್ನು ನೀಡಬೇಕೆಂದು ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ. ಮಂಜುನಾಥ ರವರು ವಾದವನ್ನು ಸಮರ್ಥವಾಗಿ ಮಂಡಿಸಿ ನೊಂದ ಬಾಲಕಿಗೆ ನ್ಯಾಯ ಒದಗಿಸಿ ಕೊಟ್ಟಿದ್ದಾರೆ.

WhatsApp Group Join Now
Telegram Group Join Now
Share This Article