ಹೈಕೋರ್ಟ ತಡೆಯಾಜ್ಞೆ : ಲಿಂಗಸಗೂರು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಮುಂದಕ್ಕೆ
ಕಲ್ಯಾಣ ಕರ್ನಾಟಕ ವಾರ್ತೆ
ಲಿಂಗಸುಗೂರು. ಸೆ.14.-ತೀವ್ರ ಕುತೂಹಲ ಕೆರಳಿಸಿದ್ದ ಲಿಂಗಸಗೂರು ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಸೆಪ್ಟೆಂಬರ್ 18 ರಂದು ನಡೆಯಬೇಕಾಗಿತ್ತು ಆದರೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಸಂಬಂಧಪಟ್ಟಂತೆ ಹೈಕೋರ್ಟ ತಡೆಯಾಜ್ಞೆ ನೀಡಿದ್ದರಿಂದಾಗಿ ಚುನಾವಣೆ ಮುಂದೂಡಲಾಗಿದೆ.
ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎ ಮೀಸಲಾತಿ ನಿಗದಿಪಡಿಸಲಾಗಿತ್ತು. ಅದರಂತೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 18 ರಂದು ಚುನಾವಣೆ ನಿಗದಿ ಮಾಡಿ ತಹಶೀಲ್ದಾರ ಶಂಶಾಲ0 ಎಲ್ಲಾ ಸದಸ್ಯರಿಗೆ ನೋಟಿಸ್ ನೀಡಿದ್ದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಾದ ಫಾತೀಮಾ ಮೌಲಾಸಾಬ, ಪ್ರಮೋಧ ಕುಮಾರ್, ಮೌಲಾಸಾಬಾ ಛೋಟುಸಾಬ್, ಶರಣಪ್ಪ ಬಸಪ್ಪ ಈ ನಾಲ್ಕು ಜನರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡದೇ ಕೆಆರ್ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ0ದು ಅಂದಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಕ್ಷಾಂತರ ಕಾಯ್ದೆಯಡಿಯಲ್ಲಿ ಈ ನಾಲ್ಕ ಜನ ಸದಸ್ಯರ ಸದಸ್ಯತ್ವ ಅನರ್ಹಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಲಿಂಗಸಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ದೂರನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಈ ನಾಲ್ಕ ಜನ ಸದಸ್ಯರ ಸದಸ್ಯತ್ವ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.
ಜಿಲ್ಲಾಧಿಕಾರಿಗಳು ಏಕಪಕ್ಷೀಯವಾಗಿ ನಿರ್ಣಯ ಕೈಗೊಂಡು ತಮ್ಮಸದಸ್ಯತ್ವ ಅನರ್ಹಗೊಳಿಸಿದ್ದಾರೆಂದು ಜಿಲ್ಲಾಧಿಕಾರಿಗಳ ಆದೇಶದ ವಿರುದ್ಧ ಈ ನಾಲ್ವರು ಹನರ್ಹರ್ಗೊಂಡ ಸದಸ್ಯರು ಕಲುಬುರಗಿ ಹೈಕೋರ್ಟಗೆ ಮೊರೆ ಹೋಗಿದ್ದರು, ಇದನ್ನು ಪರಿಶೀಲಿಸಿದ ನ್ಯಾಯಾಲಯವು ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ತಡೆಯಾಜ್ಞೆ ನೀಡಿ ಸೆಪ್ಟೆಂಬರ್ 19ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಪ್ರವಾಸ ಮೊಟಕು :
ಪುರಸಭೆಯಲ್ಲಿ ಬಹುಮತ ಇರುವ ಕಾಂಗ್ರೆಸ್ ಪಕ್ಷವು ತನ್ನ ಸದಸ್ಯರನ್ನು ಬೇರೆ ಪಕ್ಷದವರು ತಮ್ಮತ್ತ ಸೆಳೆಯದಂತೆ ಕಾಂಗ್ರೆಸ್ನ ಸದಸ್ಯರನ್ನು ಕಳೆದ 15. ದಿನಗಳ ಹಿಂದೆಯೇ ಪ್ರವಾಸಕ್ಕೆ ಕಳಿಸಲಾಗಿತ್ತು, ಆದರೆ ಚುನಾವಣೆ ಮುಂದೂಡಿದ್ದರಿ0ದ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್ ಪಕ್ಷದ ಸದಸ್ಯರು ತಮ್ಮ ಪ್ರವಾಸ ಮೊಟಕುಗೊಳಿಸಿ ಮುಂದಿನ ನ್ಯಾಯಾಲಯದ ಆದೇಶ ಬರುವವರೆಗೂ ಕಾಯುವಂತಾಗಿದೆ.
ಸ್ಪರ್ದಿಸಲು ಅವಕಾಶ ನೀಡಿ :
ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ ತಡೆಯಾಜ್ಞೆ ನೀಡಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸ್ಪರ್ದಿಸಲು ಹಾಗೂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಮತಹಾಕಲು ತಮಗೆ ಅವಕಾಶ ನೀಡಬೇಕೆಂದು ಅನರ್ಹಗೊಂಡಿದ್ದ ನಾಲ್ಕು ಜನ ಸದಸ್ಯರಾದ ಫಾತೀಮಾ ಮೌಲಾಸಾಬ, ಪ್ರಮೋಧ ಕುಮಾರ್, ಮೌಲಾಸಾಬಾ ಛೋಟುಸಾಬ್, ಶರಣಪ್ಪ ಬಸಪ್ಪ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಲಿಂಗಸುಗೂರು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಸೆ.18ರಂದು ದಿನ ನಿಗದಿ ಮಾಡಲಾಗಿತ್ತು. ಆದರೆ ಕಲುಬುರಗಿ ಹೈಕೋರ್ಟ ಪೀಠ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಸೆಪ್ಟೆಂಬರ್ 19ರವರಿಗೆ ತಡೆಯಾಜ್ಞೆ ನೀಡಿದ್ದರಿಂದ ಸೆ.19ರಂದು ವಿಚಾರಣೆ ನಂತರ ನ್ಯಾಯಾಲಯದ ಆದೇಶಕ್ಕೆ ಒಳಪಟ್ಟು ಮುಂದಿನ ದಿನಾಂಕ ನಿಗದಿ ಪಡಿಸಲಾಗುವುದು ಎಂದು ತಹಶೀಲ್ದಾರ ಶಂಶಾಲ0 ತಿಳಿಸಿದ್ದಾರೆ.