*ಸಿಂಧನೂರು ರೈತ ದಸರಾ ಉತ್ಸವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ಚಾಲನೆ*
ಕಲ್ಯಾಣ ಕರ್ನಾಟಕ ವಾರ್ತೆ
ರಾಯಚೂರು,ಅ.08,:-*
ಇಂದು ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಎ.ಪಿ.ಎಮ್.ಸಿ ಆವರಣದಲ್ಲಿ ಸಿಂಧನೂರು ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರಸಭೆ, ನಗರ ಯೋಜನಾ ಪ್ರಾಧಿಕಾರ, ಕೃಷಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರೈತ ದಸರಾ ಕಾರ್ಯಕ್ರಮಕ್ಕೆ ಸನ್ಮಾನ್ಯ *ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್* ಅವರು ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ, ಹಿಂದುಳಿದ ವರ್ಗಗಳು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಮಸ್ಕಿ ಕ್ಷೇತ್ರದ ಶಾಸಕ ಆರ್.ಬಸನಗೌಡ ತುರ್ವಿಹಾಳ, ಕೊಪ್ಪಳ ಕ್ಷೇತ್ರದ ಶಾಸಕರಾದ ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಶರಣಗೌಡ ಪಾಟೀಲ್ ಬಯ್ಯಾಪೂರ, ಬಸನಗೌಡ ಬಾದರ್ಲಿ, ಕೊಪ್ಪಳ ಶಾಸಕ ರಾಘವೇಂದ್ರ, ಶಿರುಗುಪ್ಪ ಶಾಸಕ ನಾಗರಾಜ್, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಂ.ಪುಟ್ಟಮಾದಯ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
*******************