ವ್ಯಸನಮುಕ್ತ ದಿನಾಚರಣೆ:
ಮಹಾಂತ ಶಿವಯೋಗಿಗಳ ೯೪ನೇ ಜನ್ಮ ದಿನಾಚರಣೆ
ಕಲ್ಯಾಣ ಕರ್ನಾಟಕ ವಾರ್ತೆ
ಲಿಂಗಸೂಗೂರು :ಡಾ. ಮಹಾಂತ ಶಿವಯೋಗಿಗಳು ದುರ್ವ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಅಮರೇಶ ಪಾಟೀಲ ಹೇಳಿದರು.
ಅವರು ಡಾ. ಮಹಾಂತ ಶಿವಯೋಗಿಗಳ ೯೪ ಜನ್ಮ ದಿನವನ್ನು ಅಂಗವಾಗಿ ಪಟ್ಟಣದ ಸರಕಾರಿ ಆಸ್ಪತ್ರೆಯಿಂದ ವಿಜಯಮಹಾಂತೇಶ್ವರ ಮಠದವರಗೆ ವ್ಯಸನ ಮುಕ್ತ ದಿನಾಚರಣೆ ಜಾಥಕ್ಕೆ ಜಾಲನೆ ನೀಡಿ ಮಾತನಾಡಿ ಕುಡಿತ ಮತ್ತು ಇತರೇ ದುಶ್ಚಟಗಳಿಂದ ಹಾಳಾಗಿರುವುದನ್ನು ಅರಿತು ಇಂತಹ ದುಶ್ಚಟಗಳಿಗೆ ಒಳಗಾಗಿರುವವನ್ನು ಮುಕ್ತಿಗೊಳಿಸುವ ಉದ್ದೇಶದಿಂದ ಮಹಾಂತ ಜೋಳಿಗೆ ಯೋಜನೆ ಆರಂಭಿಸಿದರು ಎಂದು ಹೇಳಿದರು.
ಮುಖ್ಯ ವೈದ್ಯಾಧಿಕಾರಿ ಡಾ.ರುದ್ರಗೌಡ ಮಾತನಾಡಿ ಬಟ್ಟೆಯ ಚೀಲದ ಜೋಳಿಗೆ ಹಿಡಿದು ಕುಡಿತದ ಚಟ ತಂಬಾಕು ಸೇರಿದಂತೆ ಎಲ್ಲಾ ರೀತಿಯ ದುಶ್ಚಟಗಳ ಬಗ್ಗೆ ಅಲ್ಲಿನ ಜನತೆಗೆ ಮನ ಮುಟ್ಟುವಂತೆ ತಿಳುವಳಿಕೆ ನೀಡಿ ಮನಪರಿವರ್ತನೆ ಮಾಡಿದರು ದುರ್ವ್ಯಸನಿಗಳು ತಮ್ಮ ಎಲ್ಲಾ ದುಶ್ಚಟಗಳ ವಸ್ತುಗಳನ್ನು ಸ್ವಾಮೀಜಿ ಅವರ ಜೋಳಿಗೆಗೆ ಹಾಕಿ ಮುಂದೆ ಅವುಗಳನ್ನು ಬಳಸುವುದಿಲ್ಲ ಎಂದು ಪ್ರಮಾಣ ಮಾಡಿಸಿದರು ಎಂದು ಹೇಳಿದರು.
ಉಪ ತಹಶಿಲ್ದಾರ ಬಸವರಾಜ ಝಲಕಿಮಠ ಮಾತನಾಡಿ ವ್ಯಸನಗಳ ಮನಪರಿವರ್ತನೆ ಮಾಡುವುದುರ ಜೊತೆಗೆ ಮಕ್ಕಳು, ವಿದ್ಯಾರ್ಥಿಗಳು, ಯುವ ಜನಾಂಗ ಇಂತಹ ಚಟಗಳಿಗೆ ಬಲಿಯಾದಂತೆ ಅರಿವು ಮೂಡಿಸುತ್ತಿದ್ದರು. ಇದರಿಂದಾಗಿ ಲಕ್ಷಾಂತರ ಜನರು ವ್ಯಸನಗಳಿಂದ ಮುಕ್ತರಾಗಿ ಅವರ ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸುತ್ತಿವೆ ಎಂದು ಹೇಳಿದರು
ಭೂಪನಗೌಡ ಪಟೀಲ ಕರಡಕಲ್ ಮಾತನಾಡಿ ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನ ಆಗಸ್ಟ್ ೧. ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ನಿರ್ಧರಿಸಿ ಆದೇಶಿಸಿದ್ದು, ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯವಾಗಿ ಮಾಡಲು ಸಾರ್ವಜನಿಕರು ಹಾಗೂ ಯುವಜನತೆ ವ್ಯಸನಗಳಿಂದ ಮುಕ್ತವಾಗಲು ಈ ದಿನಾಚರಣೆಯು ಪ್ರೇರಣೆಯಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ್ ಜೋಶಿ, ಗಿರಿಮಲ್ಲನ ಗೌಡ ,ನಾಗಭೂಷಣ,ದೊಡ್ಡಪ್ಪ ಸಹುಕಾರ ಬಸನಗೌಡ ಕರಡಕಲ್,ಶರಣಗೌಡ ಕರಡಕಲ್,ಜಂಗಮಮೂರ್ತಿ,ನಾಗಭೂಷಣ ಹಾಗೂ ನರಸಿಂಗ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇದ್ದರು