*ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ*
*ಗಾಂಧಿಭಾರತ ಕಾರ್ಯಕ್ರಮ*
*ಸ್ಥಳ ಪರಿಶೀಲನೆ*
ಕಲ್ಯಾಣ ಕರ್ನಾಟಕ ವಾರ್ತೆ
ಬೆಳಗಾವಿ (,ಕರ್ನಾಟಕ ವಾರ್ತೆ) ಡಿ.09:
ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ “ಕಾಂಗ್ರೆಸ್ ಅಧಿವೇಶನ” ದ ಶತಮಾನೋತ್ಸವ ಆಚರಣೆಯ ಪೂರ್ವಸಿದ್ಧತೆಗಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ(ಡಿ.9) ಬೆಳಗಾವಿಯ ಪೀರನವಾಡಿಯಲ್ಲಿರುವ ಗಾಂಧಿ ಭವನವಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಆಸಿಫ್(ರಾಜು) ಸೇಠ್, ಮಾಜಿ ಶಾಸಕರಾದ ಅಂಜಲಿ ನಿಂಬಳ್ಕರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮತ್ತಿತರರು ಉಪಸ್ಥಿತರಿದ್ದರು.