87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ,20.21.22ರಂದು ನಡೆಸಲು ತೀರ್ಮಾನ
ಕಲ್ಯಾಣ ಕರ್ನಾಟಕ ವಾರ್ತೆ
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ.
ಈ ಹಿಂದೆ ಜೂನ್ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ನಾವು ಮನವಿ ಮಾಡುತ್ತೇವೆ. ಎಂದರು