ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ*.

Laxman Bariker
ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ*.
WhatsApp Group Join Now
Telegram Group Join Now

*ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ*.

ಕಲ್ಯಾಣ ಕರ್ನಾಟಕ ವಾರ್ತೆ

ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರನ್ನು ಆಹ್ವಾನಿಸಲು ಕನ್ನಡ ಜ್ಯೋತಿ ರಥ ಸಿದ್ಧವಾಗಿದೆ.

ಇಂದು ಸಿದ್ಧವಾಗಿರುವ ತಾಯಿ ಭುವನೇಶ್ವರಿ ರಥಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಎನ್ ಚಲುವರಾಯಸ್ವಾಮಿ ಅವರು ತಾಯಿ ನಿಮಿಷಾಂಭ ದೇವಸ್ಥಾನದ ಮುಂಭಾಗ ಪೂಜೆ ಸಲ್ಲಿಸಿದರು.

*87 ದಿ‌ನ ರಾಜ್ಯಾದ್ಯಂತ ಸಂಚಾರ* ರಥಕ್ಕೆ ಅಧಿಕೃತವಾಗಿ ಸೆಪ್ಟೆಂಬರ್ 22 ರಂದು ಉತ್ತರ ಕನ್ನಡದ ಭುವನಗಿರಿಯಲ್ಲಿರುವ ತಾಯಿ ಭುವನೇಶ್ವರಿ ದೇವಾಲಯದಿಂದ ಚಾಲನೆ ನೀಡಲಾಗುವುದು. ರಥವು 87 ದಿ‌ನ ರಾಜ್ಯಾದ್ಯಂತ ಸಂಚಾರಿಸಿ ಸಕ್ಕರೆಯ ನಾಡಿನಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಮರೆಯದೇ ಬನ್ನಿ ಎಂದು ಅಕ್ಕರೆಯ ಆಹ್ವಾನ ನೀಡಲಿದೆ.

ಬರುವ ಎಲ್ಲರಿಗೂ ಕನ್ನಡ ನುಡಿಯ ಸವಿ ಬಡಿಸಲು ಸಿದ್ಧವಾಗಿದೆ ಎಂಬುವ ರೀತಿ ಅಲಂಕೃತ ವಾಗಿರುವ ಕನ್ನಡ ರಥ ಕನ್ನಡಿಗರ ಕಣ್ಮನ ಸೆಳೆಯಲಿದೆ.

*ಮಂಡ್ಯ ಜಿಲ್ಲೆಯ ವಿಶೇಷತೆ ಸಾರುವ ರಥ* ಕನ್ನಡ ನುಡಿ ಕಲಿಸುವ ತಾಯಿ ಭುವನೇಶ್ವರಿ, ಜಿಲ್ಲೆಗೆ ಅನ್ನ ನೀಡುವ ಕಾವೇರಿ ಮಾತೆ, ಉಳುಮೆ ಮಾಡಲು ಸಿದ್ಧವಿರುವ ಎತ್ತುಗಳು ಮತ್ತು ರೈತ, ಮಂಡ್ಯ ಜಿಲ್ಲೆ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಅವರ ಸುಂದರ ಆಕೃತಿಗಳು ಜಿಲ್ಲೆಯ ಬಗ್ಗೆ ಹಮ್ಮೆ ಉಂಟು ಮಾಡುತ್ತದೆ.

*ಜ್ಙಾನ ಪೀಠ ಪುರಸ್ಕೃತರು* ಕುವೆಂಪು, ದಾ.ರಾ ಬೇಂದ್ರೆ, ಶಿವರಾಮ್ ಕಾರಂತ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ.ಕೃ ಗೋಕಾಕ್, ಯು.ಆರ್ ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ್ ಕಂಬಾರ್ ಅವರ ಭಾವಚಿತ್ರಗಳು ಹಾಗೂ ಮಂಡ್ಯ ಜಿಲ್ಲೆಯ 7 ತಾಲ್ಲೂಕಿನಲ್ಲಿ ಪ್ರೇಕ್ಷಣೀಯ ಸ್ಥಳಗಳು ಎಲ್ಲರನ್ನೂ ಸಾಹಿತ್ಯ ಸಮ್ಮೇಳನಕ್ಕೆ ಬನ್ನಿ ಕನ್ನಡದ ಹಬ್ಬ ಆಚರಿಸೋಣ ಎನ್ನುತ್ತಿದೆ.

ಕಾರ್ಯಕ್ರಮದಲ್ಲಿ ಶ್ರೀರಂಗಪಟ್ಟಣ ಶಾಸಕ ರಾಮೇಶ್ ಬಾಬು ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ಪಿ.ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ಜಿಲ್ಲಾಧಿಕಾರಿ ಡಾ: ಕುಮಾರ, ಅಪರ ಜಿಲ್ಲಾಧಿಕಾರಿ ಡಾ ಹೆಚ್.ಎಲ್ ನಾಗರಾಜು, ಉಪವಿಭಾಗಾಧಿಕಾರಿ ಶಿವಮೂರ್ತಿ, ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕಿ ಡಾ:ಮೀರಾ ಶಿವಲಿಂಗಯ್ಯ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಕೃಷ್ಣೇಗೌಡ ಹುಸ್ಕೂರು, ಹರ್ಷ ಪೊನ್ನದೊಡ್ಡಿ, ಹರ್ಷ ವಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article