ಪದವೀಧರ ವಿಭಾಗದ ನೂತನ ಜಿಲ್ಲಾಧ್ಯಕ್ಷರಿಂದ ಕೆಪಿಸಿಸಿ ಉಪಾಧ್ಯಕ್ಷ ಡಿಎಸ್ ಹೂಲಗೇರಿಗೆ ಸನ್ಮಾನ

Laxman Bariker
ಪದವೀಧರ ವಿಭಾಗದ ನೂತನ ಜಿಲ್ಲಾಧ್ಯಕ್ಷರಿಂದ ಕೆಪಿಸಿಸಿ ಉಪಾಧ್ಯಕ್ಷ ಡಿಎಸ್ ಹೂಲಗೇರಿಗೆ ಸನ್ಮಾನ
WhatsApp Group Join Now
Telegram Group Join Now

ಪದವೀಧರ ವಿಭಾಗದ ನೂತನ ಜಿಲ್ಲಾಧ್ಯಕ್ಷರಿಂದ ಕೆಪಿಸಿಸಿ ಉಪಾಧ್ಯಕ್ಷ ಡಿಎಸ್ ಹುಲಗೇರಿಗೆ ಸನ್ಮಾನ

ಕಲ್ಯಾಣ ಕರ್ನಾಟಕ ವಾರ್ತೆ

ಲಿಂಗಸೂಗೂರು. ಆ.2.-ಲಿಂಗಸಗೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಡಿ.ಎಸ್‌.ಹೂಲಗೇರಿಯವರಿಗೆ

ಇಂದು ಲಿಂಗಸೂಗೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ನೂತನವಾಗಿ ಪದವೀಧರ ವಿಭಾಗದ ಜಿಲ್ಲಾ ಅದ್ಯಕ್ಷರಾಗಿ ನೇಮಕಗೊಂಡ ಸಂಜೀವಪ್ಪ ಚಲುವಾದಿ ಅವರು ತಮ್ಮ ನೇಮಕಕ್ಕೆ ಕಾರಣೀಭೂತರಾದ ಲಿಂಗಸಗೂರಿನ ಮಾಜಿ ಶಾಸಕರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಡಿಎಸ್ ಹುಲಗೇರಿ ಅವರಿಗೆ ಸನ್ಮಾನಿಸಿ ಅಭಿನಂದನೆಗಳನ್ನು ಸಲ್ಲಿಸಿದರು.

ನಂತರದಲ್ಲಿ ಡಿಎಸ್ ಹುಲಿಗೇರಿ ಅವರು ಮಾತನಾಡಿ ನೂತನವಾಗಿ ಪದವೀಧರ ವಿಭಾಗದ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಂಜೀವಪ್ಪ ಹುನುಕುಂಟಿ ಅವರ ಮೇಲೆ ಕಾಂಗ್ರೆಸ್ ಪಕ್ಷ ಅವರ ಪಕ್ಷ ಸಂಘಟನೆಯ ಮೇಲೆ ಅಪಾರವಾದ ವಿಶ್ವಾಸವಿಟ್ಟು ಈ ಹಿಂದೆ ಅವರು ಸಾಮಾಜಿಕ ಜಾಲತಾಣದಲ್ಲಿ ನಿರ್ವಹಿಸಿದ ಕಾರ್ಯವನ್ನು ಕಾಂಗ್ರೆಸ್ ಪಕ್ಷ ಇಂದು ಅವರಿಗೆ ಮಹತ್ತರವಾದ ಜವಾಬ್ದಾರಿಯನ್ನು ನೀಡಲಾಗಿದ್ದು ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಿಸಿಕೊಂಡು ಪದವೀಧರ ಕ್ಷೇತ್ರವನ್ನು ಅವರು ಇನ್ನಷ್ಟು ಬಲಪಡಿಸಬೇಕಾಗಿದೆ ಎಂದು ಹೇಳಿ ನೂತನ ಅಧ್ಯಕ್ಷರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದರು.
ನೂತನವಾಗಿ ಪದವೀಧರ ವಿಭಾಗದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಸಂಜೀವಪ್ಪ ಹು ನಕುಂಟಿ ಅವರು ಮಾತನಾಡಿ ಪಕ್ಷ ನನಗೆ ನನ್ನ ಮೇಲೆ ವಿಶ್ವಾಸವಿಟ್ಟು ಜಿಲ್ಲಾಧ್ಯಕ್ಷ ಸ್ಥಾನ ನೀಡುವ ಮೂಲಕ ನನಗೆ ಇನ್ನೂ ಹೆಚ್ಚಿನ ಜವಾಬ್ದಾರಿಯನ್ನು ನೀಡಲಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ನನ್ನ ನೇಮಕಕ್ಕೆ ಕಾರಣೀಭೂತರಾದ ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಯಲ್ಲಿ ಪದವೀಧರ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ವಿಶ್ವಾಸ ನನಗಿದ್ದು ಈ ದಿಶೆಯಲ್ಲಿ ಪಕ್ಷದ ರಾಜ್ಯ ಮತ್ತು ಜಿಲ್ಲೆಯ ಎಲ್ಲ ಮುಖಂಡರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಪುರಸಭಾ ಸದಸ್ಯರಾದ ಬಾಬುರೆಡ್ಡಿಮುನ್ನೂರ, ಆದಪ್ಪ ಸಾಹುಕಾರ ರಾಂಪುರ್, ಫಯಾಜ್ ಅಹ್ಮದ್, ಗದ್ದನಗೌಡ ಪಾಟೀಲ್ ಜಾಗೀರ್ ನಂದಿಹಾಳ, ಹಸನ್ ಸಾಬ್ ಮಾವಿನಬಾವಿ, ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

WhatsApp Group Join Now
Telegram Group Join Now
Share This Article