ಮುದಗಲ್: ಹಾಡಹಗಲೇ ಮನೆಗೆ ನುಗ್ಗಿ ವ್ಯಕ್ತಿಗೆ ಹಲ್ಲೆ ಮಾಡಿ ಚಿನ್ನ ಹಾಗೂ ಹಣ ದರೋಡೆ
ಕಲ್ಯಾಣ ಕರ್ನಾಟಕ ವಾರ್ತೆ
ಲಿಂಗಸುಗೂರು: ಹಾಡಹಗಲೇ ಮನೆಗೆ ನುಗ್ಗಿ ವ್ಯಕ್ತಿ ಒಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನ ಹಾಗೂ ಹಣವನ್ನು ದರೋಡೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಶುಕ್ರವಾರ ಬೆಳಗ್ಗೆ ಮೇಗಳಪೇಟೆಯಲ್ಲಿ 11.30ರ ಸುಮಾರಿಗೆ ಗ್ರಾಮದ ನಿವಾಸಿ ನೀಲಪ್ಪ ಹುಣಸೆ ಗಿಡ ಎಂಬುವವನ ಮನೆಯಲ್ಲಿ ದರೋಡೆ ನಡೆದಿದೆ. ಮನೆಯವರು ಹೊರಗಡೆ ಹೋಗಿ ಮನೆಗೆ ಬಂದಾಗ ಕಳ್ಳನೊಬ್ಬ ಮನೆಯಲ್ಲಿ ಇರುವುದನ್ನು ಗಮನಿಸಿದ್ದಾರೆ. ಕೂಡಲೇ ಕಳ್ಳನನ್ನು ತಡೆಯಲು ಯತ್ನಿಸಿದಾಗ ನೀಲಪ್ಪ ಹುಣಸಿಗಿಡ ಎಂಬುವರಿಗೆ ರಾಡ್ ನಿಂದ ತಲೆಗೆ ಒಡೆದು ಮನೆಯಲ್ಲಿದ್ದ ಸುಮಾರು 2 ತೊಲೆ ಚಿನ್ನಾ ಹಾಗೂ 6 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಹರೀಶ್, ಮಸ್ಕಿ ಸಿಪಿಐ ಬಾಲಚಂದ್ರ, ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್, ಸ್ಥಳೀಯ ಠಾಣೆಯ ಪಿಎಸ್ಐ ವೆಂಕಟೇಶ್ ಭೇಟಿ ನೀಡಿ
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.