ಲಿಂಗಸುಗೂರು ತಾಲೂಕಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಶಾಂತಿಯುತವಾಗಿ ಆರಂಭ

Laxman Bariker
ಲಿಂಗಸುಗೂರು ತಾಲೂಕಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಶಾಂತಿಯುತವಾಗಿ ಆರಂಭ
WhatsApp Group Join Now
Telegram Group Join Now

ಲಿಂಗಸುಗೂರು ತಾಲೂಕಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಶಾಂತಿಯುತವಾಗಿ ಆರಂಭ

ಕಲ್ಯಾಣ ಕರ್ನಾಟಕ ವಾರ್ತೆ

ಲಿಂಗಸುಗೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾಲೂಕಿನಲ್ಲಿ ಗುರುವಾರ ಶಾಂತಿಯುತವಾಗಿ ನಡೆಯುತಿದೆ.

ತಾಲೂಕಿನ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದ್ದು, 3691 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇಂದು
ಪರೀಕ್ಷೆಗೆ 141 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 3480 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತುಬದ್ಧವಾಗಿ ಪರೀಕ್ಷೆ ನಡೆಸಲಾಗಿದ್ದು,
ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೂಕ್ತ ಭದ್ರತಾ ವ್ಯವಸ್ಥೆ ಒದಗಿಸಿದ್ದರು. ವಿದ್ಯಾರ್ಥಿಗಳು ಸಮಯಕ್ಕೆ ಮುನ್ನ ಕೇಂದ್ರಗಳಿಗೆ ಆಗಮಿಸಿ ಪರಿಶೀಲನೆಯ ನಂತರ ಪರೀಕ್ಷಾ ಕೊಠಡಿಗಳಿಗೆ ಪ್ರವೇಶ ಪಡೆದರು.
ಪರೀಕ್ಷಾ ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ಮೇಲ್ವಿಚಾರಕರು, ಮುಖ್ಯ ಅಧೀಕ್ಷಕರು ಹಾಗೂ ಸಿಬ್ಬಂದಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರು. ಮುಂದಿನ ದಿನಗಳಲ್ಲಿಯೂ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

WhatsApp Group Join Now
Telegram Group Join Now
Share This Article