ರೈತ ಸಂಘದ ಪೂರ್ವಭಾವಿ ಸಭೆ ಮುಖಂಡರ ಆಗಮನ-ಶಂಕರ ಪವಾರ
ಕಲ್ಯಾಣ ಕರ್ನಾಟಕ ವಾರ್ತೆ
ಲಿಂಗಸಗೂರು:ನರಗುಂದದಲ್ಲಿ ಜು21ರಂದು ನಡೆಯಲಿರುವ ರೈತ ಸಮಾವೇಶದ ಹಿನ್ನೆಲೆಯಲ್ಲಿ ಲಿಂಗಸಗೂರಿನಲ್ಲಿ ಜಿಲ್ಲಾ ಸಮಿತಿಯ ಪೂರ್ವಭಾವಿ ಸಭೆಯನ್ನುಜು15ರಂದು ಸೋಮವಾರ ಬೆ 11 ಗಂಟೆಗೆ ಎಪಿಎಂಸಿ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಕರ್ನಾಟಕ ರಾಜ್ಯ ರೈತಸಂಘದ ತಾಲೂಕಾಧ್ಯಕ್ಷ ಶಂಕರ ಪವಾರ ತಿಳಿಸಿದ್ದಾರೆ
ಜು21ರಂದು ನರಗುಂದದಲ್ಲಿ ರೈತ ಹುತಾತ್ಮ ದಿನದ ಸಮಾವೇಶ ನಡೆಯಲಿದ್ದು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಅದಕ್ಕಾಗಿ ರೈತ ಸಂಘದ ಪೂರ್ವಭಾವಿ ಸಭೆಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಅಮಿನ್ ಪಾಷಾ ದಿದ್ದಿಗಿಯವರ ನೇತೃತ್ವದಲ್ಲಿ ನಡೆಯಲಿದ್ದು ಸದರಿ ಸಭೆಗೆ ಜಿಲ್ಲಾಧ್ಯಕ್ಷ ಬಸವರಾಜ ಹಂಚಿನಾಳ, ರಾಜ್ಯ ಉಪಾಧ್ಯಕ್ಷ ಮಲ್ಲನಗೌಡ ರಾಂಪೂರ, ಅಂಬರೀಶ ಸರ್ಕಾರ, ಗ್ರಾಮ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಸೇರಿದಂತೆ ಆಗಮಿಸಿಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬೆಂಬಲಿಸುವಂತೆ ಅವರು ತಿಳಿಸಿದ್ದಾರೆ